ಮನುವಾದಿಗಳಿಂದ ಸಂವಿಧಾನಕ್ಕೆ ಅಪಾಯ: ಸಚಿವ ಪ್ರಿಯಾಂಕ್ ಖರ್ಗೆ

Update: 2018-03-28 13:36 GMT

ಕಲಬುರ್ಗಿ, ಮಾ. 28: ‘ಮನುವಾದಿಗಳಿಂದ ಸಂವಿಧಾನಕ್ಕೆ ಅಪಾಯವಿದ್ದು, ಅಂಬೇಡ್ಕರ್ ಮತ್ತು ಬಸವಣ್ಣನ ಅನುಯಾಯಿಗಳು, ಶೋಷಿತರು, ಹಿಂದುಳಿದವರು, ಅಲ್ಪಸಂಖ್ಯಾತ ಮತ್ತು ಮಹಿಳೆಯರು ಜಾಗೃತರಾಗಬೇಕಿದೆ’ ಎಂದು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.

ಬುಧವಾರ ಜಿಲ್ಲೆಯ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಅಂಬೇಡ್ಕರ್ ಅವರ ಪುತ್ಥಳಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ರಚಿಸಿದ್ದು ಭಾರತ ರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಎಂದು ಸ್ಮರಿಸಿದರು.

ಭಾರತದ ಸಂವಿಧಾನ ಕೇವಲ ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಅದು ಅಖಂಡ ಭಾರತದ ಪರಿಕಲ್ಪನೆ ಮತ್ತು ಆಧುನಿಕ ಭಾರತದ ಪರಿಕಲ್ಪನೆಯನ್ನು ಇಟ್ಟುಕೊಂಡು ರಚಿಸಿರುವ ಸಂವಿಧಾನ ಎಂದ ಅವರು, ಅಂಬೇಡ್ಕರ್‌ರವರನ್ನು ಇಂದಿನ ಯುವ ಜನಾಂಗ ಹೆಚ್ಚು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದರು.

ಯುವ ಸಮೂಹ ಕೇವಲ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪಿಸಿ, ಜಯಂತಿ ಆಚರಣೆ ಮಾಡಿದರೆ ಸಾಲದು, ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕು. ಜತೆಗೆ ಅವರ ಆಶಯಗಳನ್ನು ಬೇರೆಯವರಿಗೆ ತಲುಪಿಸುವ ಕೆಲಸವನ್ನು ಹೆಚ್ಚುಚ್ಚು ಮಾಡಬೇಕು ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News