ಮಾ.29ರಿಂದ ಎಪ್ರಿಲ್ 5ರ ವರೆಗೆ ‘ಕರುನಾಡ ಯುವ ಜಾಗೃತಿ ಯಾತ್ರೆ’: ಸಂಸದ ಪ್ರತಾಪ್ ಸಿಂಹ

Update: 2018-03-28 13:44 GMT

ಬೆಂಗಳೂರು, ಮಾ. 28: ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬಿಜೆಪಿ ಯುವ ಮೋರ್ಚಾದಿಂದ ಮಾ.29 ರಿಂದ ಎಪ್ರಿಲ್ 5ರ ವರೆಗೆ ‘ಕರುನಾಡ ಯುವ ಜಾಗೃತಿ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ಪ್ರತಾಪ್‌ಸಿಂಹ ತಿಳಿಸಿದ್ದಾರೆ.

ಬುಧವಾರ ಮಲ್ಲೇಶ್ವರಂ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಯುವ ಜಾಗೃತಿ ಯಾತ್ರೆ ಅಂಗವಾಗಿ ಬೈಕ್ ರ್ಯಾಲಿ ನಡೆಸಲಿದ್ದಾರೆ ಎಂದು ವಿವರಿಸಿದರು.

ಪ್ರತಿ ಬೂತ್‌ಗೆ ಮೂರು ಬೈಕ್‌ನಂತೆ ಕಾರ್ಯಕರ್ತರು ಎಲ್ಲ ಗ್ರಾಮಗಳ ಪ್ರತಿ ಮನೆಯನ್ನೂ ಸಂಪರ್ಕಿಸಿ, ಐದು ವರ್ಷಗಳಿಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತ, ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆ ಕುಸಿತ, ತೃಷ್ಟೀಕರಣ, ಕೃಷಿ ಬಿಕ್ಕಟ್ಟು ಸೇರಿದಂತೆ ಇನ್ನಿತರ ಅಂಶಗಳನ್ನು ಒಳಗೊಂಡ ಕರಪತ್ರಗಳನ್ನು ಹಂಚಿಕೆ ಮಾಡಲಿದ್ದಾರೆ ಎಂದು ಹೇಳಿದರು.

ರಾಜ್ಯದ ಕಾಂಗ್ರೆಸ್ ಆಡಳಿತದಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಬಿಜೆಪಿ ಸಂಘ ಪರಿವಾರದ ಕಾರ್ಯಕರ್ತರು ಹತ್ಯೆಗಳಲ್ಲಿ ಪಿಎಫ್‌ಐ ಮತ್ತು ಕೆಎಫ್‌ಡಿ ಸಂಘಟನೆಗಳ ಕೈವಾಡವಿದ್ದರೂ, ಕೊಲೆಗಾರರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸರಕಾರ ಹಿಂಪಡೆದಿದೆ ಎಂದು ಅವರು ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News