ಮಾ.31ರಂದು ಅಕ್ಕಮಹಾದೇವಿ ಜಯಂತಿ
Update: 2018-03-28 21:12 IST
ಬೆಂಗಳೂರು, ಮಾ.28: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾ.31ರಂದು ನಗರದ ಕಲಾಗ್ರಾಮದಲ್ಲಿ ವಚನಕಾರ್ತಿ ಅಕ್ಕಮಹಾದೇವಿ ಜಯಂತಿಯನ್ನು ಆಚರಿಸಲಾಗುತ್ತಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ವಸುಂಧರಾ ಭೂಪತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಅಕ್ಕಮಹಾದೇವಿ ಸೇವಾ ಸಮಾಜದ ಅಧ್ಯಕ್ಷೆ ಉಮಾದೇವಿ ಚಂದ್ರಶೇಖರ್, ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ಪ್ರಮೀಳಾ ಶಂಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ವೇಳೆ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಡಾ.ಶಿವಗಂಗಾ ರುಮ್ಮಾ ಅಕ್ಕಮಹಾದೇವಿ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.