×
Ad

ಬೆಳಗಾವಿ: ಲಿಂಗಾಯತ ಮಹಾಸಭಾ ಅಧ್ಯಕ್ಷ ಬಸವರಾಜ ಹೊರಟ್ಟಿಗೆ ಸನ್ಮಾನ

Update: 2018-03-28 21:59 IST

ಬೆಳಗಾವಿ, ಮಾ.28: ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರನ್ನು ಬಸವ ಭೀಮ ಸೇನೆ ಮತ್ತು ಲಿಂಗಾಯತ ಸೇವಾ ಸಮಿತಿ ವತಿಯಿಂದ ಬುಧವಾರ ನಗರದ ಎಸ್.ಜಿ.ಬಾಳೇಕುಂದ್ರಿ ಸಭಾಭವನದಲ್ಲಿ ಬಸವಣ್ಣನವರ ಭಾವಚಿತ್ರ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.

ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷರಾದ ನಂತರ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ್ದ ಹಾಗೂ ಸ್ವತಂತ್ರ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಕಳೆದ 6 ತಿಂಗಳುಗಳಿಂದ ಪಕ್ಷ ಮತ್ತು ವೈಯಕ್ತಿಕ ಎಲ್ಲ ಚಟುವಟಿಕೆಗಳನ್ನು ಬದಿಗೊತ್ತಿ ಧರ್ಮಕ್ಕಾಗಿ ಅವಿರತ ಶ್ರಮಿಸಿರುವ ಹಿನ್ನೆಲೆಯಲ್ಲಿ ಅವರನ್ನು ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ನಾಗನೂರು ರುದ್ರಾಕ್ಷಿಮಠದ ಶ್ರೀ ಸಿದ್ದರಾಮ ಸ್ವಾಮೀಜಿ, ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ, ಲಿಂಗಾಯತ ಸೇವಾ ಸಮಿತಿಯ ಪ್ರದೀಪ ತೇಲಸಂಗ, ರಾಜು ಮಗದುಮ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News