ಮಡಿಕೇರಿ: ಮಾ.29 ರಂದು ಕಡಂಗದಲ್ಲಿ ಮಸೀದಿ ಉದ್ಘಾಟನೆ

Update: 2018-03-28 17:10 GMT

ಮಡಿಕೇರಿ, ಮಾ.28: ಕಡಂಗದ ಬದ್ರಿಯಾ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ನೂತನವಾಗಿ ನಿರ್ಮಿಸಿರುವ ಮಸೀದಿಯ ಉದ್ಘಾಟನಾ ಕಾರ್ಯಕ್ರಮ ಮಾ.29 ರಂದು ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ, 11 ಗಂಟೆಗೆ ಕೊಕ್ಕಂಡಬಾಣೆ ದರ್ಗಾ ಝಿಯಾರತ್, 12 ಗಂಟೆಗೆ ಖಬರ್ ಝಿಯಾರತ್ ಜರುಗಲಿದೆ. ಸಂಜೆ 4 ಗಂಟೆಗೆ ನಡೆಯುವ ಸ್ನೇಹ ಕೂಟ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಫ್ ರಾಷ್ಟ್ರೀಯ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದಿಕ್ ಮೋಂಟುಗೋಳಿ ವಿಷಯ ಮಂಡನೆ ಮಾಡಲಿದ್ದಾರೆ.

ಸಂಜೆ 7 ಗಂಟೆಗೆ ಸಾರ್ವಜನಿಕ ಮಹಾಸಮ್ಮೇಳನ ನಡೆಯಲಿದ್ದು, ಸಯ್ಯದ್ ಫಝಲ್ ಕೋಯಮ್ಮ ತಂಙಳ್ (ಕೂರತ್ ತಂಙಳ್) ಪ್ರಾರ್ಥನೆಯ ನೇತೃತ್ವ ವಹಿಸಲಿದ್ದಾರೆ. ಅಖಿಲ ಭಾರತ ಸುನ್ನೀ ಜಂಇಯ್ಯತ್ತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಶೈಖುನಾ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಉಸ್ತಾದ್ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ, ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ.

ಮಾ.30 ರಂದು ಜುಮಾ ನಮಾಝಿನ ನಂತರ ಎಸ್‍ವೈಎಸ್‍ನ ಕೇರಳ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಧಾರ್ಮಿಕ ಪ್ರವಚನ ನೀಡಲಿದ್ದಾರೆ ಎಂದು ಸಂಸ್ಥೆಯ ಪ್ರಮುಖರಾದ ನೌಫಲ್ ಕಡಂಗ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News