×
Ad

ಮಂಗಳೂರು: ಕೊಂಕಣಿ ಸುಗಮ ಸಂಗೀತ ಕಮ್ಮಟ

Update: 2018-03-28 23:47 IST

ಮಂಗಳೂರು, ಮಾ. 28: ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠವು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ಕೊಂಕಣಿ ವಿಭಾಗದ ಸಹಯೋಗದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಕೊಂಕಣಿ ಸುಗಮ ಸಂಗೀತ ಕಮ್ಮಟವನ್ನು ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷಆರ್. ಪಿ. ನಾಯ್ಕ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಕೊಂಕಣಿ ಅಧ್ಯಯನ ಪೀಠ ಮತ್ತು ಸ್ನಾತಕೋತ್ತರ ಕೊಂಕಣಿ ವಿಭಾಗದ ಕಾರ್ಯವನ್ನು ಶ್ಲಾಘಿಸಿದರು.

ಮುಂಬರುವ ದಿನಗಳಲ್ಲಿ ಕೊಂಕಣಿಯ ಕಂಪು ಎಲ್ಲೆಡೆ ಪಸರಿಸಲು ಇಂಥ ಶೈಕ್ಷಣಿಕ ಚಟುವಟಿಕೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಅವರು, ಕೊಂಕಣಿ ಸುಗಮ ಸಂಗೀತ ಪ್ರಕಾರವನ್ನು ಅಧ್ಯಯನ ಮಾಡುವ ಅವಶ್ಯಕತೆ ಇದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಶಿರಸಿಯ ಡಾ. ಶೈಲಜಾ ಮತ್ತು ಜಗದೀಶ ನಾ. ಭಂಡಾರಿ ಭಾಗವಹಿಸಿದ್ದರು. ಕೊಂಕಣಿ ಅಧ್ಯಯನ ಪೀಠದ ಸಂಯೋಜಕ ಡಾ. ಜಯವಂತ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸ್ನಾತಕೋತ್ತರ ಕೊಂಕಣಿ ವಿಭಾಗದ ಸಂಯೋಜಕರಾದ ಡಾ. ಅರಂದ ಶ್ಯಾನಭಾಗ್ ವಂದಿಸಿದರು. ಫ್ಲೊರಾ ಕ್ಯಾಸ್ತಲಿನೋ ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

ಸ್ಥಳೀಯ ಪ್ರಕಾಶ ಶೆಣೈ, ಭಾವನಾ ಶೆಣೈ, ಅಪರ್ಣಾ ಪ್ರಭು, ಅಪೂರ್ವ ಕಿಣಿ, ಸಮರ್ಥ ಶೆಣೈ ತಂಡದವರು ಕೊಂಕಣಿ ಸುಗಮ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News