×
Ad

ಮಹಾಮೈತ್ರಿಗೆ ವೇದಿಕೆ...?

Update: 2018-03-28 23:55 IST

ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಎಲ್ಲ ಪಕ್ಷಗಳನ್ನು ಸಂಘಟಿಸುವ ಕಾರ್ಯಕ್ಕೆ ಚಾಲನೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್‌ಡಿಎ ಮಿತ್ರಪಕ್ಷವಾಗಿರುವ ಶಿವಸೇನೆ ಸೇರಿದಂತೆ ಹಲವು ಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಸಭೆಯಲ್ಲಿ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ, ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ ಹಾಗೂ ಅರುಣ್ ಶೌರಿ ಭಾಗವಹಿಸಿದ್ದು ವಿಶೇಷವಾಗಿತ್ತು. ಅಲ್ಲದೇ ಮಮತಾ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ನಾಯಕಿ ಸೋನಿಯಾ ಅವರನ್ನೂ ಭೇಟಿಯಾಗಿ  ಮಾತುಕತೆ ನಡೆಸಿದ್ದಾರೆ. ಈ ಮೂಲಕ 2019ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣೆಸಲು ಮಹಾಮೈತ್ರಿಗೆ ಚಾಲನೆ ಸಿಕ್ಕಂತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor