ನಟಿ ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2018-03-29 14:37 GMT

ಬೆಂಗಳೂರು, ಮಾ. 29: ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಅವರನ್ನು ಖುದ್ದು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಗುರುವಾರ ಬೆಳಗ್ಗೆ ಇಲ್ಲಿನ ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವೈದ್ಯರಿಂದ ನಟಿ ಜಯಂತಿಯವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ಜಯಂತಿ ಅವರು ಚಿಕಿತ್ಸೆಗೆ ಸ್ಪಂದಿಸಿತಿದ್ದು, ಆತಂಕ ಪಡೆಯುವ ಅಗ್ಯತವಿಲ್ಲವೆಂದು ವೈದ್ಯರು ಭರವಸೆ ನೀಡಿದ್ದಾರೆಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News