×
Ad

ಶಿವಮೊಗ್ಗ: ಪ್ರತ್ಯೇಕ ರಸ್ತೆ ಅಪಘಾತ; ಕೆಎಸ್‍ಆರ್ ಪಿ ಪೊಲೀಸ್ ಸೇರಿದಂತೆ ಇಬ್ಬರು ಮೃತ್ಯು

Update: 2018-03-29 21:40 IST

ಶಿವಮೊಗ್ಗ, ಮಾ. 29: ಜಿಲ್ಲೆಯ ಶಿವಮೊಗ್ಗ ಹಾಗೂ ಶಿಕಾರಿಪುರ ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಕೆಎಸ್‍ಆರ್ ಪಿ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಶಿವಮೊಗ್ಗ ವರದಿ: ನಗರದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಚೇನಹಳ್ಳಿ ಬಳಿ ಕೆಎಸ್‍ಆರ್‍ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವರದಿಯಾಗಿದೆ. ಮಾಚೇನಹಳ್ಳಿ ಕೆಎಸ್‍ಆರ್ ಪಿ ಘಟಕದಲ್ಲಿ ಎಆರ್‍ಎಸ್‍ಐ ಆಗಿದ್ದ ಧರ್ಮಣ್ಣ (59) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬಸ್ ಚಾಲಕನ ಅಜಾಗರೂಕತೆ, ವೇಗದ ಚಾಲನೆಯೇ ಅವಘಡಕ್ಕೆ ಕಾರಣವಾಗಿದೆ. ಈ ಸಂಬಂಧ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಶಿಕಾರಿಪುರ ವರದಿ: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಡೆಕಟ್ಟೆ ಗ್ರಾಮದ ಶಿಕಾರಿಪುರ - ಹೊನ್ನಾಳ್ಳಿ ರಸ್ತೆಯಲ್ಲಿ ಟ್ರಾಕ್ಟರೊಂದು ಢಿಕ್ಕಿ ಹೊಡೆದ ಪರಿಣಾಮ ಮಾರುತಿ ವ್ಯಾನ್‍ನಲ್ಲಿದ್ದ ಮಹಿಳೆ ಮೃತಪಟ್ಟು, ಚಾಲಕ ಗಾಯಗೊಂಡಿರುವ ಘಟನೆ ವರದಿಯಾಗಿದೆ. ನಾಗಮ್ಮ ಮೃತಪಟ್ಟ ಮಹಿಳೆಯಾಗಿದ್ದು, ನಾಗರಾಜ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಟ್ರ್ಯಾಕ್ಟರ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News