×
Ad

ಮಂಗಳೂರು: ಯೇಸು ಕ್ರಿಸ್ತರ ಕೊನೆಯ ಭೋಜನ ದಿನಾಚರಣೆ

Update: 2018-03-29 22:58 IST

ಮಂಗಳೂರು, ಮಾ. 29: ಕ್ರೈಸ್ತರು ಗುರುವಾರ ಯೇಸು ಕ್ರಿಸ್ತರ ಕೊನೆಯ ಭೋಜನದ ದಿನವನ್ನು ಆಚರಿಸಿದರು. ಗುರುವಾರ ಸಂಜೆ ಚರ್ಚ್‌ಗಳಲ್ಲಿ ಮತ್ತು ಇತರ ಕ್ರೈಸ್ತ ಪ್ರಾರ್ಥನಾ ಮಂದಿರಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು.

ಮಂಗಳೂರಿನ ರೊಝಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ರೆ.ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಅವರು ಬಲಿ ಪೂಜೆ ಮತ್ತು ಇತರ ಕಾರ್ಯಕ್ರಮಗಳ ನೇತೃತ್ವ ವಹಿಸಿ ಪ್ರವಚನ ನೀಡಿದರು.

ಕೆಥೆಡ್ರಲ್‌ನ ರೆಕ್ಟರ್ ಫಾ.ಜೆ.ಬಿ. ಕ್ರಾಸ್ತಾ ಮತ್ತಿತರ ಧರ್ಮ ಗುರುಗಳು ಉಪಸ್ಥಿತರಿದ್ದರು. ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ಸಂದರ್ಭದಲ್ಲಿ 12 ಮಂದಿ ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರವನ್ನು ಪ್ರತಿಪಾದಿಸಿದ್ದರು. ಅದರ ಸಂಕೇತವಾಗಿ ಕೆಥೆಡ್ರಲ್‌ನಲ್ಲಿ ಬಿಷಪರು ಹಾಗೂ ಇತರ ಚರ್ಚ್‌ಗಳಲ್ಲಿ ಸ್ಧಳೀಯ ಧರ್ಮಗುರುಗಳು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News