×
Ad

ಮಂಡ್ಯ: ಕೆ.ಕೆ.ರಾಧಾಕೃಷ್ಣಗೆ ಟಿಕೆಟ್ ನೀಡುವಂತೆ ದೇವೇಗೌಡರಿಗೆ ಮನವಿ

Update: 2018-03-29 23:31 IST

ಮಂಡ್ಯ, ಮಾ.29: ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‍ನ್ನು ಕೆ.ಕೆ.ರಾಧಾಕೃಷ್ಣ ಅವರಿಗೆ ನೀಡುವಂತೆ ನಗರಸಭೆಯ ಹಲವು ಸದಸ್ಯರು ಹಾಗೂ ಮಾಜಿ ಸದಸ್ಯರು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ದೇವೇಗೌಡ ಅವರನ್ನು ಬೋರೇಗೌಡ ಅವರ ನೇತೃತ್ವದಲ್ಲಿ ಭೇಟಿ ಮಾಡಿದ ಹಾಲಿ ಮತ್ತು ಮಾಜಿ ಸದಸ್ಯರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ರಾಧಾಕೃಷ್ಣ ಅವರಿಗೆ ಟಿಕೆಟ್ ನೀಡಬೇಕು ಎಂದರು.

ರಾಧಾಕೃಷ್ಣ ಅವರ ನಾಯಕತ್ವದ ಮೇಲೆ ಅಚಲ ವಿಶ್ವಾಸವನ್ನು ಇಟ್ಟಿದ್ದೇವೆ. ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‍ನ್ನು ಕೆ.ಕೆ.ರಾಧಾಕೃಷ್ಣ ಅವರಿಗೆ ನೀಡಿದಲ್ಲಿ ಗೆಲುವಿಗೆ ಶ್ರಮಿಸುತ್ತೇವೆ ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News