×
Ad

ಮಂಡ್ಯ: ಖರ್ಚು ವೆಚ್ಚಗಳ ಮೇಲೆ ನಿಗಾ ವಹಿಸಲು ಡಿಸಿ ಸೂಚನೆ

Update: 2018-03-29 23:44 IST

ಮಂಡ್ಯ, ಮಾ.29: ವಿಧಾನಸಭೆ ಚುನಾವಣೆಯ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳು ಖರ್ಚುವೆಚ್ಚಗಳ ಮೇಲೆ ನಿಗಾವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಸೂಚಿಸಿದ್ದಾರೆ.

ಗುರುವಾರ ತನ್ನ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಚುನಾವಣೆ ಖರ್ಚು ವೆಚ್ಚಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಭ್ಯರ್ಥಿ 28 ಲಕ್ಷ ರೂ. ವರೆಗೆ ವೆಚ್ಚ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಚುನಾವಣಾ ವೆಚ್ಚಕ್ಕಾಗಿ ಏಜೆಂಟ್ ಒಳಗೊಂಡಂತೆ ಅಭ್ಯರ್ಥಿಯು ಜಂಟಿ ಬ್ಯಾಂಕ್‍ ಖಾತೆಯನ್ನು ಹೊಸದಾಗಿ ತೆರೆಯಬೇಕು. 20 ಸಾವಿರ ರೂ. ಮೀರಿದ ಹಣವನ್ನು ಚೆಕ್ ಮೂಲಕ ವ್ಯವಹರಿಸಬೇಕು ಎಂದು ಅವರು ಹೇಳಿದರು.

ಖರ್ಚು ವೆಚ್ಚದ ವ್ಯವಹಾರದಲ್ಲಿ ಯಾವುದೇ ಲೋಪ ದೋಷಗಳು ಕಂಡುಬಂದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದ ಅವರು, ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿ 5 ಜನರಿಗೆ ಮಾತ್ರ ಅವಕಾಶವಿದೆ ಎಂದರು.

ಜಿಪಂ ಸಿಇಓ ಬಿ.ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಹೆಚ್ಚವರಿ ಪೊಲೀಸ್ ವರಿಷ್ಟಾಧಿಕಾರಿ ಲಾವಣ್ಯ, ಚುನಾವಣಾ ವೆಚ್ಚ ನೋಡಲ್ ಅಧಿಕಾರಿ ರವಿಕುಮಾರ್, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News