ಬಿಜೆಪಿ ಮುಖಂಡರಿಂದ ನೀತಿ ಸಂಹಿತೆ ಉಲ್ಲಂಘನೆ: ದಿನೇಶ್‌ಗುಂಡೂರಾವ್

Update: 2018-03-30 14:51 GMT

ಬೆಂಗಳೂರು, ಮಾ.30: ಮೈಸೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮೃತ ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಶುಕ್ರವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ಅಮಿತ್ ಶಾ, ಯಡಿಯೂರಪ್ಪ, ಪ್ರತಾಪ್‌ಸಿಂಹ ಸೇರಿದಂತೆ ಇನ್ನಿತರರು ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಘೋರ ಅಪರಾಧ ಎಂದರು.

5 ಲಕ್ಷ ರೂ.ಕೊಟ್ಟಿರುವುದನ್ನು ರಾಜು ಅವರ ತಾಯಿಯೇ ಮಾಧ್ಯಮಗಳಲ್ಲಿ ಹೇಳಿದ್ದಾರೆ. ಈ ಪ್ರಕರಣದ ವಿರುದ್ಧ ಕಾಂಗ್ರೆಸ್‌ನಿಂದ ಶೀಘ್ರವೇ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ದಿನೇಶ್‌ಗುಂಡೂರಾವ್ ಹೇಳಿದರು.

ಅಮಿತ್ ಶಾ ರಾಜ್ಯಕ್ಕೆ ಬರೋದನ್ನು ನಿಲ್ಲಿಸಲಿ, ಅಮಿತ್ ಶಾ ಹಾಗೂ ಯಡಿಯೂರಪ್ಪ ಇಬ್ಬರು ಜೈಲಿಗೆ ಹೋಗಿ ಬಂದವರು. ಇಬ್ಬರ ವಿರುದ್ಧವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು. ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವ ಅಮಿತ್ ಶಾರನ್ನು ಗಡಿಪಾರು ಮಾಡಬೇಕು ಎಂದು ಅವರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News