ಬಂಟ್ವಾಳ: ಎಸ್‌ಡಿಪಿಐ ಚುನಾವಣಾ ಪ್ರಚಾರ ಸಮಿತಿಯಿಂದ ಸಿದ್ಧತಾ ಸಭೆ
ಬಂಟ್ವಾಳ, ಮಾ. 30: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ಚುನಾವಣಾ ಪ್ರಚಾರ ಸಮಿತಿಯಿಂದ ಸಿದ್ಧತಾ ಸಭೆಯು ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದಲ್ಲಿ ಪಾಣೆಮಂಗಳೂರಿನಲ್ಲಿ ಶುಕ್ರವಾರ ಸಂಜೆ ನಡೆಯಿತು.
ಕ್ಷೇತ್ರ ಚುನಾವಣಾ ಉಸ್ತುವಾರಿ ಅಬ್ದುಲ್ ಖಾದರ್ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಮೂಲಕ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಮಾತನಾಡಿ, ಕಾರ್ಯಕರ್ತರ ಹುರುಪು, ಉತ್ಸಾಹ ನೋಡುವಾಗ ಹೆಮ್ಮೆಯಾಗುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಎಸ್‌ಡಿಪಿಐಗೆ ಹೊಸ ಇತಿಹಾಸ ಬರೆಯಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು, ನಾಯಕರು ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಚುನಾವಣಾ ಪೂರ್ವ ತಯಾರಿಯ ಬಗ್ಗೆ ಗಂಭೀರ ಚರ್ಚೆ ನಡೆಯಿತು.
ಈ ಸಂಧರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಕೆ, ರಾಜ್ಯ ಸಮಿತಿ ಸದಸ್ಯ ನ್ಯಾ ಅಬ್ದುಲ್ ಮಜೀದ್, ಮುಖಂಡರಾದ ಯೂಸುಫ್ ಆಲಡ್ಕ, ಇಜಾಝ್ ಅಹ್ಮದ್, ಝಕರಿಯಾ ಕಲ್ಲಡ್ಕ, ಮುನೀಷ್ ಅಲಿ, ಇಸ್ಮಾಯಿಲ್ ಬಾವ ಮತ್ತಿತರರು ಉಪಸ್ಥಿತರಿದ್ದರು.