ಉಡುಪಿ: ಯುವ ಮೋರ್ಚಾದಿಂದ ಕರುನಾಡ ಯುವ ಜಾಗೃತಿ ಯಾತ್ರೆ
ಉಡುಪಿ, ಮಾ.30: ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಚುನಾವಣಾ ಪೂರ್ವ ತಯಾರಿಯ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಬಾ ಕ್ಷೇತ್ರಗಳಲ್ಲಿ ಯುವ ಜನತೆಯನ್ನು ಜಾಗೃತಿ ಗೊಳಿಸುವ ಉದ್ದೇಶದಿಂದ ಕರುನಾಡ ಯುವ ಜಾಗೃತಿ ಬೈಕ್ ರ್ಯಾಲಿ ನಡೆಯಲಿದೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಬೈಕ್ ರ್ಯಾಲಿ ಎ. 2ರಂದು ಕುಂದಾಪುರ, 3ರಂದು ಕಾಪು, 4ರಂದು ಕಾರ್ಕಳ, 5ರಂದು ಬೈಂದೂರು ಮತ್ತು ಉಡುಪಿ ವಿಧಾನಸಬಾ ಕ್ಷೇತ್ರಗಳಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರುಗಳ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯ ಮತ್ತು ಜಿಲ್ಲೆಯ ನಾಯಕರು ಯುವ ಜಾಗೃತಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಬೈಕ್ ರ್ಯಾಲಿಯು ಎಲ್ಲಾ ವಿಧಾನಸಭಾ ಕ್ಷೇತ್ರಗಳ ಎಲ್ಲಾ ವಾರ್ಡ್/ಗ್ರಾಪಂ ವ್ಯಾಪ್ತಿಯಲ್ಲಿ ಹಾದುಹೋಗಲಿವೆ. ಕಾಂಗ್ರೆಸ್ ನೇತೃತ್ವದ ಭ್ರಷ್ಟ ರಾಜ್ಯ ಸರಕಾರದ ವೈಪಲ್ಯಗಳ ಆರೋಪ ಪಟ್ಟಿಯನ್ನು ಯುವ ಮೋರ್ಚಾದ ಕಾರ್ಯಕರ್ತರು ಕ್ಷೇತ್ರದ ಜನರಿಗೆ ತಲುಪಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.