×
Ad

ವಿಷ ಸೇವಿಸಿ ಆತ್ಕಹತ್ಯೆಗೆ ಯತ್ನ: ಚಿಕಿತ್ಸೆ ಫಲಕಾರಿಯಾಗದೆ ಕೃಷಿಕ ಮೃತ್ಯು

Update: 2018-03-31 20:52 IST

ಪುತ್ತೂರು, ಮಾ. 31: ಸಾಲಬಾಧೆಯಿಂದ ನೊಂದ ಕೃಷಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಕತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಕಜೆ ನಿವಾಸಿ ಬಾಲಪ್ಪ ಯಾನೆ ಭರತ್ (31) ಮೃತಪಟ್ಟವರು. ಬಾಲಪ್ಪ ಅವರು ಕೃಷಿಕರಾಗಿದ್ದು, ಅದಕ್ಕಾಗಿ ಸಾಕಷ್ಟು ಸಾಲ ಮಾಡಿದ್ದರು ಎನ್ನಲಾಗಿದೆ. ಮಾ.27ರಂದು ತನ್ನ ಮನೆಯ ಪಕ್ಕದ ಗುಡ್ಡದಲ್ಲಿ ಅಡಿಕೆಗೆ ಬಳಸುವ ಮೈಲುತುತ್ತು ಸೇವಿಸಿ ಅಸ್ವಸ್ಥರಾಗಿದ್ದರು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರಿಗೆ 10 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. 

ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಾಯಿ, ಪತ್ನಿ, 6 ಮಂದಿ ಸಹೋದರರು ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News