×
Ad

ಉಡುಪಿ ಜಿಲ್ಲೆಯಾದ್ಯಂತ ವೈಭವದ ಪಾಸ್ಕ ಜಾಗರಣೆ

Update: 2018-03-31 22:02 IST

ಉಡುಪಿ, ಮಾ.31: ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರಗಿತು.
ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಉಡುಪಿಯ ಶೋಕಮಾತಾ ಇಗರ್ಜಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಉಡುಪಿ ಚರ್ಚಿನ ಪ್ರಧಾನ ಧರ್ಮಗುರು ವಂ. ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ. ವಿಜಯ್ ಡಿಸೋಜಾ ಹಾಗೂ ಅತಿಥಿ ಧರ್ಮಗುರುಗಳಾದ ವಂ.ವಿಲಿಯಂ ಮಾರ್ಟಿಸ್, ವಂ.ಲಾರೆನ್ಸ್ ಡಿಸೋಜಾ ಉಪಸ್ಥಿತರಿದ್ದರು.

ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ದ ನೇತೃತ್ವವನ್ನು ಕ್ಯಾಥೆಡ್ರಲಿನ ಪ್ರಧಾನ ಧರ್ಮಗುರು ವಂ.ಸ್ಟ್ಯಾನಿ ಬಿ ಲೋಬೊ ವಹಿಸಿದ್ದರು.

ಈ ಸಂದರ್ಭದಲ್ಲಿ ಬೃಹತ್ ಗಾತ್ರದ ಈಸ್ಟರ್ ಕ್ಯಾಂಡಲ್ ಹಚ್ಚಿ ಮೆರವಣಿಗೆಯಲ್ಲಿ ಸಾಗಿ ಬಂದು ಚರ್ಚ್‌ನ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಹಳೆ ಹಾಗೂ ಹೊಸಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು. ಧರ್ಮಾಧ್ಯಕ್ಷರು ಮತ್ತು ಧರ್ಮಗುರುಗಳು ಹೊಸ ನೀರಿನ ಆಶೀರ್ವಚನ ನೆರವೇರಿಸಿ ನೆರೆದ ಭಕ್ತಾದಿಗಳ ಮೇಲೆ ಹೊಸ ನೀರನ್ನು ಪ್ರೋಕ್ಷಿಸಿ ಆಶೀರ್ವದಿಸಿದರು.

ಬಳಿಕ ನಡೆದ ಬಲಿಪೂಜೆಯಲ್ಲಿ ಯೇಸುವಿನ ಕಷ್ಟಗಳು, ಪುನರುತ್ಥಾನದ ಸಂದೇಶವನ್ನು ವಿವರಿಸಿದ ಧರ್ಮಗುರುಗಳು, ಕ್ರೈಸ್ತ ವಿಶ್ವಾಸ, ಸತ್ಯದ ಮರುದೃಡೀಕರಣ ನಡೆಸಿದರು. ಬಲಿಪೂಜೆಯ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್‌ಹಬ್ಬದ ಶುಭಾಶಯ ಹೇಳಿ ಸಂಭ್ರಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News