×
Ad

ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2018-03-31 22:58 IST

ಗಂಗೊಳ್ಳಿ, ಮಾ.31: ವೈಯಕ್ತಿಕ ಕಾರಣದಿಂದ ಮನನೊಂದ ಸೇನಾಪುರ ಗ್ರಾಮದ ಗುಡ್ಡೆಯಂಗಡಿ ನಿವಾಸಿ ಲಕ್ಷ್ಮೀ(65) ಎಂಬವರು ಮಾ.30ರಂದು ಬೆಳಗ್ಗೆ ಮನೆಯ ಹಿಂಬದಿಯಲ್ಲಿರುವ ಕೊಟ್ಟಿಗೆಯ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ:  ಬೋಳ ಗ್ರಾಮದ ವಂಜಾರಕಟ್ಟೆ ನಿವಾಸಿ ರಮೇಶ ಕುಲಾಲ್ (55) ಎಂಬವರು ಮಾ.30ರಂದು ಬೆಳಗ್ಗೆಯಿಂದ ಸಂಜೆಯ ಮಧ್ಯಾವಧಿಯಲ್ಲಿ ಮನೆಯ ರೂಮಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News