×
Ad

ಯುವತಿಯ ಅತ್ಯಾಚಾರ ಆರೋಪ: ಯುವಕನ ಬಂಧನ

Update: 2018-03-31 23:34 IST

ಮಂಗಳೂರು, ಮಾ. 31: ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಆರೋಪದಲ್ಲಿ ಸುಳ್ಯದ ಮುರುಳ್ಯ ನಿವಾಸಿ ಜಯಂತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜಯಂತ್ ಕಾವೂರು ಜಂಕ್ಷನ್‌ನಲ್ಲಿರುವ ಸಂಸ್ಥೆಯೊಂದರಲ್ಲಿ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ. ಈತನಿಗೆ 8 ತಿಂಗಳ ಹಿಂದೆ ಕಾವೂರಿನಲ್ಲಿ ಕೆಲಸ ಮಾಡುತ್ತಿದ್ದ ಬಂಟ್ವಾಳದ ಯುವತಿಯೊಬ್ಬಳ ಪರಿಚಯವಾಗಿತ್ತು. ಆಕೆಯನ್ನು ಮದುವೆಯಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದ. ಇದರಿಂದ ಆಕೆ ಗರ್ಭಧರಿಸಿದ್ದು, ಜಯಂತ್‌ನಿಗೆ ಮದುವೆಯಾಗಲು ಒತ್ತಾಯಿಸಿದಾಗ ನಿರಾಕರಿಸಿದ್ದಾನೆ. ಈ ಬಗ್ಗೆ ಯುವತಿ ಕಾವೂರು ಠಾಣೆಗೆ ದೂರು ನೀಡಿದ್ದಳು.

ಯುವತಿ ನೀಡಿದ್ದ ದೂರಿನ ಆಧಾರದಲ್ಲಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಕಾವೂರು ಬಳಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News