×
Ad

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

Update: 2018-03-31 23:42 IST

ಬೆಂಗಳೂರು,ಮಾ.31: ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ದುರ್ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ಮೂಲದ ರಾಜಗೋಪಾಲನಗರ ನಿವಾಸಿ ವೇದಕುಮಾರ್(25) ಮೃತ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ 1ರ ಸುಮಾರಿಗೆ ಹೆಬ್ಬಾಳದ ಸ್ನೇಹಿತನ ಮನೆಯಿಂದ ವಾಪಸಾಗುತ್ತಿದ್ದ ವೇಳೆ ಮಾರ್ಗ ಮಧ್ಯೆ ಗೊರಗುಂಟೆಪಾಳ್ಯದ ಎಂಇಎಸ್ ಮೇಲುಸೇತುವೆ ಬಳಿ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎನ್ನಲಾಗಿದೆ.
 ಅಪಘಾತದಲ್ಲಿ ಗಾಯಗೊಂಡ ವೇದಕುಮಾರ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಬ್ರೆಡ್ ಕಂಪನಿಯ ಹೌಸ್ ಕೀಪಿಂಗ್ ವಿಭಾಗದ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಈ ಸಂಬಂಧ ಮೊಕದಮೆ ದಾಖಲಿಸಿಕೊಂಡಿರುವ ಯಶವಂತಪುರ ಸಂಚಾರ ಪೊಲೀಸರು ಕ್ಯಾಬ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News