ಬೆಂಗಳೂರು: ವೇಶ್ಯಾವಾಟಿಕೆ ದಂಧೆ; ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು, ಎ. 1: ಹೊರರಾಜ್ಯದಿಂದ ಹುಡುಗಿಯರನ್ನು ಮಾವನ ಕಳ್ಳ ಸಾಗಣೆ ಮೂಲಕ ಕರೆತಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದ ಆರೋಪದ ಮೇಲೆ ಇಲ್ಲಿನ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಚೋಳನಾಯಕನಹಳ್ಳಿ ನಿವಾಸಿ ಸಿದ್ಧಾರ್ಥ ಯಾನೆ ಶೀನಾ (20) ಹಾಗೂ ದೊಡ್ಡಬಳ್ಳಾಪುರ ಮೂಲದ ಶ್ರೀಧರ (35) ಎಂದು ಗುರುತಿಸಲಾಗಿದೆ. ಆರೋಪಿಗಳು ದೇವರ ಜೀವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಆರ್‌ಟಿ ನಗರದ ಕನಕನಗರದ ಮನೆಯೊಂದರಲ್ಲಿ ದಂಧೆ ನಡೆಸುತ್ತಿದ್ದರು ಎಂದು ಗೊತ್ತಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಹೊರ ರಾಜ್ಯದ ಯುವತಿಯರನ್ನು ರಕ್ಷಿಸಿದ್ದಾರೆ. ಆರೋಪಿಗಳಿಂದ ಮೂರು ಮೊಬೈಲ್ ಫೋನ್, ನಗದನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಪ್ರಕರಣ ಸಂಬಂಧ ಸುರೇಶ್ ಮತ್ತು ಮಂಜುನಾಥ್ ಎಂಬವರ ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಶೋಧ ಕಾರ್ಯ ಕೈಗೊಳ್ಳಲಾಗಿದೆ.
ಆರೋಪಿಗಳು ಹಣದ ಆಮಿಷವೊಡ್ಡಿ ಹೊರ ರಾಜ್ಯದ ಹುಡುಗಿರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ದೇವರಜೀವನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.