×
Ad

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲಿ: ಸಚಿವ ಪ್ರಿಯಾಂಕ್ ಖರ್ಗೆ

Update: 2018-04-01 19:14 IST

ಬೆಂಗಳೂರು, ಎ.1: ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿ ಆಗಬೇಕೆಂಬುದು ಅವರ ಪುತ್ರನಾದ ನನ್ನ ಆಸೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದು, ಕಾಂಗ್ರೆಸ್ ನೇತೃತ್ವದ ಸರಕಾರದ ಉತ್ತಮ ಯೋಜನೆಗಳಿಗೆ ಜನ ಮತ್ತೊಮ್ಮೆ ಬೆಂಬಲ ನೀಡುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿ ಆಗಬೇಕೆಂಬುದು ತುಂಬಾ ಜನರ ನಿರೀಕ್ಷೆ. ಹಾಗೆಂದ ಮಾತ್ರಕ್ಕೆ ಪಕ್ಷಕ್ಕೆ ವಿರುದ್ಧವಾಗಿ ಮಾತನಾಡುತ್ತಿದ್ದೇನೆಂದು ಭಾವಿಸಬೇಕಿಲ್ಲ. ನನ್ನ ಅಭಿಪ್ರಾಯ ಹೇಳಿದ್ದೇನೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದರು.

ಖರ್ಗೆ ಅವರಿಗೆ ಕಳೆದ ಬಾರಿ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಕೂದಲೆಳೆಯ ಅಂತರದಲ್ಲಿ ತಪ್ಪಿತ್ತು. ಐದು ವರ್ಷಗಳಿಂದಲೂ ತಮಗೆ ಅವಕಾಶ ಸಿಗದಿದ್ದರೂ ಅವರು ಎಂದೂ ಸರಕಾರದ ವಿರುದ್ಧ ಭಿನ್ನಮತದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೆ ಪಕ್ಷನಿಷ್ಠೆಯನ್ನು ಮೆರೆದಿದ್ದಾರೆ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News