ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: 1.12 ಕೋಟಿ ರೂ., ಮದ್ಯ, 160 ಲ್ಯಾಪ್‌ಟಾಪ್ ವಶ
ಬೆಂಗಳೂರು, ಎ. 1: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಸ್ಟಾಟಿಕ್ ಸರ್ವೆಲೆನ್ಸ್ ಟೀಮ್ಸ್ 1.12 ಕೋಟಿ ರೂ.ನಗದು, 10 ಸೀರೆಗಳು, 160 ಲ್ಯಾಪ್‌ಟಾಪ್ ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
49 ಸಾವಿರ ರೂ.ಗಳಿಗೂ ಅಧಿಕ ಮೊತ್ತದ 18.90 ಲೀ.ಮದ್ಯ, 2 ಕೆಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. 30 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ವರೆಗೂ ಒಟ್ಟಾರೆ 1921 ಲೀ. ಮದ್ಯ ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, 5766 ಪರವಾನಗಿ ಹೊಂದಿದ ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
577 ವ್ಯಕ್ತಿಗಳಿಂದ ಮುಚ್ಚಳಿಕೆ ಪಡೆಯಲಾಗಿದೆ. 1660 ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಚುನಾವಣೆ ಘೋಷಣೆ ಬಳಿಕ ಈವರೆಗೂ 27,025 ಪರವಾನಗಿ ಹೊಂದಿದ ಶಸ್ತ್ರಾಸ್ತ್ರಗಳನ್ನು ದಾಸ್ತಾನು ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.