ಅರವಿಂದ ಲಿಂಬಾವಳಿ ಕಚೇರಿ ಮೇಲೆ ದಾಳಿ: ಅಕ್ರಮವಾಗಿ ಸಂಗ್ರಹಿಸಿದ್ದ ಪ್ಲಾಸ್ಟಿಕ್ ಬಕೆಟ್‌ಗಳು ವಶ
Update: 2018-04-01 20:47 IST
ಬೆಂಗಳೂರು, ಎ.1: ನಗರದ ತಿಮ್ಮಸಂದ್ರದಲ್ಲಿರುವ ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ ಲಿಂಬಾವಳಿ ಕಚೇರಿಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದಾರೆ ಎನ್ನಲಾದ ಪ್ಲಾಸ್ಟಿಕ್ ಬಕೆಟ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ.
ಶನಿವಾರ ರಾತ್ರಿ ದೂರುದಾರರಿಂದ ಬಂದ ಖಚಿತ ಮಾಹಿತಿಯೆ ಮೇರೆಗೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು, ಕಚೇರಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದ ಬಕೆಟ್‌ಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಆವಲಹಳ್ಳಿ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.