×
Ad

ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ

Update: 2018-04-01 21:05 IST

ಶ್ರೀನಗರ,ಎ.1: ಎನ್‌ಕೌಂಟರ್‌ಗಳಲ್ಲಿ ಎಂಟು ಉಗ್ರರ ಹತ್ಯೆ ಮತ್ತು ಭದ್ರತಾ ಪಡೆಗಳೊಂದಿಗಿನ ಘರ್ಷಣೆಗಳಲ್ಲಿ ಇಬ್ಬರು ನಾಗರಿಕರ ಸಾವುಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರವಿವಾರ ಕಾಶ್ಮೀರದಲ್ಲಿ ಮೊಬೈಲ್ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಭಯೋತ್ಪಾದಕರೊಂದಿಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಸೇನಾ ಯೋಧರೂ ಹುತಾತ್ಮರಾಗಿದ್ದಾರೆ.

ರವಿವಾರ ಮಧ್ಯಾಹ್ನ ದಕ್ಷಿಣ ಕಾಶ್ಮೀರದ ಹಲವೆಡೆಗಳಲ್ಲಿ ಮತ್ತು ಶ್ರೀನಗರದ ಕೆಲವು ಭಾಗಗಳಲ್ಲಿ ಘರ್ಷಣೆಗಳು ಭುಗಿಲೆದ್ದ ಬೆನ್ನಿಗೇ ಮೊಬೈಲ್ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸ ಲಾಯಿತು ಎಂದು ಅಧಿಕಾರಿಯೋರ್ವರು ತಿಳಿಸಿದರು. ಕಿಡಿಗೇಡಿಗಳು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುವುದನ್ನು ತಡೆಯಲು ಮುನ್ನೆಚ್ಚರಿಕೆ ಹೆಜ್ಜೆಯಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.

ಈ ಹಿಂದೆ ಕಿಡಿಗೇಡಿಗಳು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯುಂಟಾಗಿದ್ದಾಗ ರೈಲುಗಳನ್ನು ತಮ್ಮ ದಾಳಿಯ ಗುರಿಗಳನ್ನಾಗಿಸಿಕೊಂಡಿದ್ದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಕಾಶ್ಮೀರದಲ್ಲಿ ರೈಲುಸೇವೆಗಳನ್ನೂ ಅಮಾನತು ಗೊಳಿಸಿದ್ದಾರೆ.

ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಮೂರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಎಂಟು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದು, ಓರ್ವ ಭದ್ರತಾ ಪಡೆಗಳಿಗೆ ಶರಣಾಗಿದ್ದಾನೆ.

ಕೆಲವು ಸ್ಥಳಗಳಲ್ಲಿ ಸ್ಥಳೀಯರು ಭದ್ರತಾ ಪಡೆಗಳೊಂದಿಗೆ ಘರ್ಷಣೆಗಿಳಿದು ಕಲ್ಲುತೂರಾಟಗಳನ್ನು ನಡೆಸಿದ್ದು, ಪ್ರತಿದಾಳಿ ಯಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News