ಕೊಡವೂರು ಅಂಗನವಾಡಿ ಕೇಂದ್ರ ಉದ್ಘಾಟನೆ: ನೀತಿ ಸಂಹಿತೆ ಉಲ್ಲಂಘಿಸಿದ ಐವರ ವಿರುದ್ಧ ಪ್ರಕರಣ
Update: 2018-04-01 21:05 IST
ಮಲ್ಪೆ, ಎ.1: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಕೊಡವೂರು ಗ್ರಾಮದ ಬೊಟ್ಟಲು ಎಂಬಲ್ಲಿ ಇಂದು ಮಧ್ಯಾಹ್ನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದ ಮಾಜಿ ಜಿಪಂ ಸದಸ್ಯೆ ಸೇರಿದಂತೆ ಐವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಕಾರ ಅಭಿವೃದ್ದಿ ಅಧಿಕಾರಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಉಡುಪಿ ಸುಧೀರ್ ಕುಮಾರ್ ಮಾಹಿತಿಯಂತೆ ಸ್ಥಳಕ್ಕೆ ತೆರಳಿ ಪರಿಶೀಲಿಸಿ ದಾಗ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿರುವುದು ಕಂಡುಬಂದಿದ್ದು, ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದ ಮಾಜಿ ಜಿಪಂ ಸದಸ್ಯೆ ಲೀಲಾ ಜತ್ತನ್ ಕಲ್ಮಾಡಿ, ಅಂಗನವಾಡಿ ಕಾರ್ಯಕರ್ತೆ ಆಶಾ, ಸಾಧು ಸಾಲ್ಯಾನ್, ಉದಯ ಕಲಾ ಯುವಕ ಮಂಡಲದ ಅಧ್ಯಕ್ಷ ಮನೋಜ್, ಚಂದ್ರ ಶೇಖರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.