×
Ad

​ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-04-01 21:13 IST

ಬೈಂದೂರು, ಎ.1: ವಿಪರೀತ ಕುಡಿತದ ಚಟ ಹೊಂದಿದ್ದ ಗಂಗನಾಡು ನಿವಾಸಿ  ಕೃಷ್ಣ ಮರಾಠಿ(37) ಎಂಬವರು ಆರ್ಥಿಕ ಸಮಸ್ಯೆಯಿಂದ ಮನನೊಂದು ಮಾ.31ರಂದು ಮಧ್ಯಾಹ್ನ  ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ವೈಯಕ್ತಿಕ ಕಾರಣದಿಂದ ಮನನೊಂದ ಹಂಗಾರಕಟ್ಟೆ ಮೂಡು ಹೊಳೆಯ ರೋಸ್ಟನ್ ರೋಡ್ರಿಗಸ್ ಎಂಬವರು ಮಾ.31ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಮಹಡಿಗೆ ನೇಣು ಬೀಗಿದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News