ಅಪಾರ್ಟ್ ಮೆಂಟ್ ನಿಂದ ಕೆಳಕ್ಕೆ ಜಿಗಿದು ಟಿವಿ ನಿರೂಪಕಿ ಆತ್ಮಹತ್ಯೆ

Update: 2018-04-02 08:55 GMT

ಹೈದರಾಬಾದ್, ಎ.2: ನ್ಯೂಸ್ ಚಾನೆಲೊಂದರ ನಿರೂಪಕಿಯೊಬ್ಬರು ಅಪಾರ್ಟ್ ಮೆಂಟ್ ನಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದಾರಾಬಾದ್ ನಲ್ಲಿ ರವಿವಾರ ರಾತ್ರಿ ನಡೆದಿದೆ. ಹೈದರಾಬಾದ್ ನ ಮೂಸಾಪೇಟ್ ನಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಚಾನೆಲ್ ಒಂದರ ನಿರೂಪಕಿ ರಾಧಿಕಾ ರೆಡ್ಡಿ ಆತ್ಮಹತ್ಯೆಗೆ ಶರಣಾಗಿರುವವರು.

ರಾಧಿಕಾರ ಬ್ಯಾಗ್ ನಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು, “ನನ್ನ ಮೆದುಳೇ ನನ್ನ ಶತ್ರು” ಎಂದು ಅದರಲ್ಲಿ ಬರೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ.

“ಕೆಲಸ ಮುಗಿಸಿ ಮನೆಗೆ ಬಂದ ತಕ್ಷಣ ರಾಧಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕೆಲಸ ಮುಗಿಸಿ ಮನೆಗೆ ಬಂದ ಅವರು ನೇರವಾಗಿ ಟೆರೇಸ್ ಗೆ ಹೋಗಿ ಕೆಳಕ್ಕೆ ಹಾರಿದ್ದಾರೆ ಎನ್ನಲಾಗಿದೆ,

ರಾಧಿಕಾ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ತಲೆಗೆ ಗಂಭೀರ ಗಾಯವಾಗಿತ್ತು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News