×
Ad

ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿಯಾಗಿ ಎ.23 ರಂದು ನಾಮಪತ್ರ ಸಲ್ಲಿಸುತ್ತೇನೆ: ಸಿ.ಎಂ ಸಿದ್ದರಾಮಯ್ಯ

Update: 2018-04-02 19:13 IST

ಮೈಸೂರು,ಎ.02: ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.23 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. 

ಕ್ಷೇತ್ರದ ಹಾರೋಹಳ್ಳಿಯಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕ್ಷೇತ್ರದಿಂದ ಏಳು ಬಾರಿ ಸ್ಪರ್ಧೆ ಮಾಡಿ ಐದು ಬಾರಿ ಗೆಲುವು ಸಾಧಿಸಿದ್ದೇನೆ. ಮುಖ್ಯಮಂತ್ರಿಯಾಗಿ ಈ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದೇನೆ. ಜನತೆ ಆಶೀರ್ವದಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. 

ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. 
ನನ್ನ ಕೊನೆಯ ಚುನಾವಣೆಯನ್ನು ಈ ಕ್ಷೇತ್ರದಿಂದಲೇ ಎದುರಿಸಲು ತೀರ್ಮಾನಿಸಿದ್ದೇನೆ. ಆದ್ದರಿಂದ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News