ರೋಗ ನಿರ್ಣಯದಲ್ಲಿ ಆಧುನಿಕ ವೈದ್ಯಕೀಯ ಸೌಲಭ್ಯಗಳ ಪಾತ್ರ ಮಹತ್ವದ್ದು: ಡಾ.ಮುರಳೀಧರ್

Update: 2018-04-02 15:16 GMT

ಉಡುಪಿ, ಎ.2: ರೋಗ ಚರಿತ್ರೆಯ ಹಿನ್ನೆಲೆಯನ್ನು ಇಟ್ಟುಕೊಂಡು ಅಗತ್ಯತೆಗೆ ಸರಿಯಾಗಿ ಇಮೇಜಿಂಗ್ ಟೆಕ್‌ನಿಕ್ಸ್‌ಗಳನ್ನು ಅಳವಡಿಸಿಕೊಂಡಾಗ ದೇಹದಲ್ಲಿ ರೋಗ ಪ್ರಸಾರಕ್ಕೆ ಕಾರಣವಾದ ಅತೀ ಸೂಕ್ಷ್ಮ ವಿಷಯಗಳು ತಿಳಿಯುತ್ತವೆ. ಹೀಗಾಗಿ ರೋಗ ನಿರ್ಣಯದಲ್ಲಿ ಆಧುನಿಕ ವೈದ್ಯಕೀಯ ಸೌಲಭ್ಯಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಉಡುಪಿ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಮುರಳೀಧರ ಶರ್ಮಾ ಹೇಳಿದ್ದಾರೆ.

ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ರೋಗ ನಿದಾನ ವಿಭಾಗದ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಇಮೇಜಿಂಗ್ ಟೆಕ್‌ನಿಕ್ಸ್ ಎಂಬ ವಿಷಯದ ಕುರಿತು ರಾಜ್ಯಮಟ್ಟದ ವೈದ್ಯಕೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ.ಬಿ.ಆರ್. ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ರೋಗನಿದಾನ ವಿಭಾಗದ ಮುಖ್ಯಸ್ಥ ಡಾ.ನಾಗರಾಜ್ ಎಸ್. ಸ್ವಾಗತಿಸಿದರು. ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಪಿ. ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ಸರಿತ ಟಿ. ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಾಗಾರದಲ್ಲಿ ವಿವಿಧ ಕಾಲೇಜುಗಳ 200ಕ್ಕೂ ಅಧಿ ಕ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News