ನ್ಯಾಕ್ ರಾಷ್ಟ್ರೀಯ ಕಾರ್ಯಾಗಾರದ ಸಮಾರೋಪ
Update: 2018-04-02 20:47 IST
ಉಡುಪಿ, ಎ.2: ಶಿಕ್ಷಣ ಸಂಸ್ಥೆಗಳು ಜಾಗತಿಕ ಗುಣಮಟ್ಟ ಬೆಳೆಸಿಕೊಳ್ಳಲು ಪೂರಕ ವಾತಾವರಣ ನಿರ್ಮಿಸುವಲ್ಲಿ ನ್ಯಾಕ್ ಮೌಲ್ಯಮಾಪನ ಸಹಕಾರಿ ಯಾಗಲಿದೆ ಎಂದು ಮೂಡಬಿದರೆ ಧವಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ರವೀಶ್ ಕುಮಾರ್ ಹೇಳಿದ್ದಾರೆ.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ನ್ಯಾಕ್ ರಾಷ್ಟ್ರೀಯ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತ ನಾಡುತಿದ್ದರು.
ಉಜಿರೆ ಎಸ್‌ಡಿಎಂ ಮೆನೇಜ್‌ಮೆಂಟ್ ಕಾಲೇಜಿನ ಪ್ರಾಂಶುಪಾಲ ಡಾ. ಅರುಣಾ ಕಾಮತ್, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಡಾ.ರಾಬರ್ಟ್ ಕ್ಲೈವ್ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರೊ.ಸ್ಯಾಮುವೆಲ್ ಕೆ.ಸ್ಯಾಮುವೆಲ್, ಸಂಪನ್ಮೂಲ ವ್ಯಕ್ತಿ ಡಾ.ಸುಬಾಷಿಣಿ ಮುತ್ತುಕೃಷ್ಣನ್ ಉಪಸ್ಥಿತರಿದ್ದರು. ಸಂಘಟಕ ಡಾ.ಜಯರಾಮ ಶೆಟ್ಟಿಗಾರ್ ವಂದಿಸಿದರು. ಅಶ್ಮಿತಾ ಕಾರ್ಯಕ್ರಮ ನಿರೂಪಿಸಿ ದರು.