×
Ad

ಮೈಸೂರು: ಕೆ.ಆರ್.ಎಸ್ ಹಿನ್ನೀರಿನಲ್ಲಿ ಮುಳುಗಿ ಯುವಕ ಮೃತ್ಯು

Update: 2018-04-02 21:51 IST

ಮೈಸೂರು,ಏ.2: ಕೆ.ಆರ್ ಎಸ್ ಹಿನ್ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತನನ್ನು ಮೈಸೂರಿನ ದೇವೇಗೌಡನಹುಂಡಿ ನಿವಾಸಿ ಬಸವರಾಜು (20) ಎಂದು ಗುರುತಿಸಲಾಗಿದ್ದು, ಹಿನ್ನೀರಿನಲ್ಲಿ ಈಜುವ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

ಬಸವರಾಜು ಮೃತದೇಹ ಇನ್ನು ಪತ್ತೆಯಾಗಿಲ್ಲ ಎನ್ನಲಾಗಿದ್ದು, ಸ್ಥಳೀಯ ಮೀನುಗಾರರು ಬಸವರಾಜು ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ.ಬಸವರಾಜು ಈಜುವ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News