×
Ad

ದಲಿತರಿಂದ ಭಾರತ ಬಂದ್...

Update: 2018-04-02 23:50 IST

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಗೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿರುದ್ಧ ದಲಿತ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಭಾರತ ಬಂದ್ ಸಂದರ್ಭದಲ್ಲಿ ಉತ್ತರ ಭಾರತದಾದ್ಯಂತ ಭಾರೀ ಪ್ರತಿಭಟನೆಗಳು ಭುಗಿಲೆದ್ದಿವೆ. ಮಧ್ಯಪ್ರದೇಶದಲ್ಲಿ ನಡೆದ ಘರ್ಷಣೆಗಳಲ್ಲಿ ಆರು ಮಂದಿ ಸಾವನ್ನಪ್ಪಿದ್ದರೆ, ರಾಜಸ್ಥಾನದ ಅಲ್ವಾರ್ ಹಾಗೂ ಉತ್ತರ ಪ್ರದೇಶದ ಮುಝಫ್ಫರ್‌ನಗರದಲ್ಲಿ ತಲಾ ಒಬ್ಬರು ಗುಂಡೇಟಿಗೆ ಬಲಿಯಾಗಿದ್ದಾರೆ. ಪಂಜಾಬ್, ರಾಜಸ್ಥಾನ, ಜಾರ್ಖಂಡ್ ಮತ್ತು ಉತ್ತರ ಪ್ರದೇಶಗಳ ವಿವಿಧ ಭಾಗಗಳಲ್ಲಿ ಹಿಂಸಾಚಾರ ನಡೆದಿರುವುದು ವರದಿಯಾಗಿದೆ. ಪಂಜಾಬ್‌ನಲ್ಲಿ ಜನಜೀವನ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಸಾರಿಗೆ ಸೇರಿದಂತೆ ಯಾವುದೇ ವಾಹನಗಳು ರಸ್ತೆಗಿಳಿದಿರಲಿಲ್ಲ. ಅಲ್ಲಿ ರಾಜ್ಯ ಸರಕಾರವು ಸೇನೆಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶವು ಸಮುದಾಯದ ರಕ್ಷಣೆಗಾಗಿರುವ ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯನ್ನು ದುರ್ಬಲಗೊಳಿಸಿದೆಯೆಂದು ಆರೋಪಿಸಿ ದಲಿತರು ಅದರ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ತನ್ಮಧ್ಯೆ ತನ್ನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರಕಾರವು ಸೋಮವಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor