ಅಮೆರಿಕದ ನಾಸಾ ಶಿಬಿರದಲ್ಲಿ ಎಕ್ಸ್‌ಪರ್ಟ್ ವಿದ್ಯಾರ್ಥಿಗಳಿಗೆ ತರಬೇತಿ

Update: 2018-04-03 10:56 GMT


ಮಂಗಳೂರು, ಎ.3: ಅಮೆರಿಕದ ಅಲಬಾಮಾದ ಯುಎಸ್ ಸ್ಪೇಸ್ ಮತ್ತು ರಾಕೆಟ್ ಸೆಂಟರ್‌ನಲ್ಲಿ ನಾಸಾ ಆಯೋಜಿಸಿದ್ದ ಸ್ಪೇಸ್ ಕ್ಯಾಂಪ್‌ನಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ 55 ವಿದ್ಯಾರ್ಥಿಗಳು ಭಾಗವಹಿಸಿ, ಎರಡು ವಿಭಾಗಗಳಲ್ಲಿ ಬಹುಮಾನ ಗಳಿಸಿದ್ದಾರೆ.

ಬೆಸ್ಟ್ ಮಿಷನ್ ಮತ್ತು ಬೆಸ್ಟ್ ಟ್ರಿವಿಯ ಬಹುಮಾನವನ್ನು ಎಕ್ಸ್‌ಪರ್ಟ್ ವಿದ್ಯಾರ್ಥಿಗಳು ಪಡೆಯುವ ಮೂಲಕ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪುರಸ್ಕಾರ ಪಡೆದಂತಾಗಿದೆ. ಬಾಹ್ಯಾಕಾಶ ಪರಿಶೋಧನೆ ಮತ್ತು ಅದರ ಹಿಂದಿರುವ ವಿಜ್ಞಾನದ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಮೂರು ದಿನಗಳ ಈ ಶಿಬಿರ ಬಹಳಷ್ಟು ಪ್ರಯೋಜನಕಾರಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳೊಂದಿಗೆ ಬಾಹ್ಯಾಕಾಶ ವಿಜ್ಞಾನಿಗಳ ಚರ್ಚೆ ಹಾಗೂ ನಾನಾ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

ಸಂಸ್ಥೆಯ ಉಪಾಧ್ಯಕ್ಷೆ ಉಷಾಪ್ರಭಾ ಎನ್. ನಾಯಕ್ ಹಾಗೂ ತಾಂತ್ರಿಕ ನಿರ್ದೇಶಕ ಅಂಕುಶ್ ಎನ್. ನಾಯಕ್ ನೇತೃತ್ವದಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಳಚ್ಚಿಲ್ ಹಾಗೂ ಕೊಡಿಯಾಲ್‌ಬೈಲ್ ಕ್ಯಾಂಪಸ್‌ನ 55 ವಿದ್ಯಾರ್ಥಿಗಳ ತಂಡವು ಸ್ಯಾನ್‌ಫ್ರಾನ್ಸಿಸ್ಕೋದಲ್ಲಿರುವ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ, ಲಾಸ್ ಏಂಜಲೀಸ್‌ನಲ್ಲಿರುವ ಯುನಿವರ್ಸಲ್ ಸ್ಟುಡಿಯೋ, ಲಾಸ್‌ವೇಗಸ್ ಹಾಗೂ ಇನ್ನಿತರ ಸ್ಥಳಗಳಿಗೆ 15 ದಿನಗಳ ಅಧ್ಯಯನ ಪ್ರವಾಸವನ್ನು ಕೈಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News