ಕೇಂದ್ರ ಸಚಿವ ಚೌಬೆ ಪುತ್ರನ ಜಾಮೀನು ಅರ್ಜಿ ತಿರಸ್ಕೃತ
Update: 2018-04-03 20:23 IST
ಭಗಲ್‌ಪುರ, ಎ.3: ಜಿಲ್ಲೆಯಲ್ಲಿ ನಡೆದ ಕೋಮುಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆಯವರ ಪುತ್ರ ಅರ್ಜಿತ್ ಶಾಶ್ವತ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಬಿಹಾರದ ನ್ಯಾಯಾಲಯ ತಳ್ಳಿಹಾಕಿದೆ.
ನಿರೀಕ್ಷಣಾ ಜಾಮೀನು ಕೋರಿ ಅರ್ಜಿತ್ ಶಾಶ್ವತ್ ಸಲ್ಲಿಸಿದ್ದ ಅರ್ಜಿಯನ್ನು ಭಗಲ್‌ಪುರ ನ್ಯಾಯಾಲಯ ತಿರಸ್ಕರಿಸಿದ ಬಳಿಕ ಅವರನ್ನು ರವಿವಾರ ಪಾಟ್ನಾದಲ್ಲಿ ಬಂಧಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಶಾಶ್ವತ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.