ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ
ಮಂಗಳೂರು,ಎ.3 : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಳೆದ ಮಾ. 20ರಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷಯುತ ರಾಹುಲ್ ಗಾಂಧಿಯವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಾಗೂ ನೆಹರೂ ಮೈದಾನದಲ್ಲಿ ನಡೆದ ಸಮಾವೇಶಕ್ಕೆ ಸೇರಿದ ಜನಸಮೂಹಕ್ಕೆ ಕೃತಜ್ಞತೆ ಸಲ್ಲಿಸಿದರು.
ಸಹಕರಿಸಿದ ಕಾಂಗ್ರೆಸ್ ಪಕ್ಷದ ಕೇಂದ್ರದ ವರಿಷ್ಠರಾದ ಮಲ್ಲಿಕಾರ್ಜುನ್ ಖರ್ಗೆ ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೊಪಾಲ್, ಎ.ಐ.ಸಿ.ಸಿ ಕಾರ್ಯದರ್ಶಿ ಪಿ.ಸಿ.ವಿಷ್ಣುನಾಧನ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲೆಯ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಯು.ಬಿ ವೆಂಕಟೇಶ್, ಸಚಿವ ಯು.ಟಿ ಖಾದರ್ ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತಿನ ಮಾಜಿ ಸದಸ್ಯರು ಹಾಗೂ ಕೆ.ಪಿ.ಸಿ.ಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ, ಪಕ್ಷದ ಎಲ್ಲಾ ಕಾರ್ಯಕರ್ತರು ಸಹಿತ ಎಲ್ಲರಿಗೂ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ಕೃತಜ್ಞತೆ ಸಲ್ಲಿಸಿ ಅಭಿನಂಧಿಸಿದರು.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಜಯಭೇರಿ ಗಳಿಸಲು ಎಲ್ಲಾ ರೀತಿಯಲ್ಲಿ ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಿ ಬೂತ್ ಮಟ್ಟದಲ್ಲಿ ಕಾರ್ಯ ನಿರ್ವಹಿಸುವಂತೆ ಪಕ್ಷದ ಪದಾಧಿಕಾರಿಗಳಿಗೆ ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಸಭೆಯನ್ನು ಉದ್ದೇಶಿಸಿ ಶಾಸಕ ಕೆ. ಅಭಯಚಂದ್ರ ಜೈನ್, ವಿಧಾನಪರಿಷತನ ಮಾಜಿ ಮುಖ್ಯ ಸಚೇತಕ ಕೆ.ಎಸ್.ಎಮ್. ಮಸೊದ್, ಮಾಜಿ ರಾಜ್ಯ ಸಭಾ ಸದಸ್ಯ ಬಿ. ಇಬ್ರಾಹೀಂ, ಕೆ.ಪಿ.ಸಿ.ಸಿ. ಕಾರ್ಯದರ್ಶಿ ಭರತ್ ಮುಂಡೋಡಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಹಂಗಾಮಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಮತ್ತು ಕಾರ್ಯಕರ್ತರಿಗೆ ಚುನಾವಣೆಯ ನೀತಿ ಸಂಹಿತೆಯ ಬಗ್ಗೆ ಸಭೆಯಲ್ಲಿ ತಿಳಿಸಿದರು.
ಈ ಸಭೆಯಲ್ಲಿ ಬಂಟ್ವಾಳ್ ವಿಧಾನ ಸಭಾ ಕ್ಷೇತ್ರದ ಎಸ್.ಡಿ.ಪಿ.ಐ. ಕಾರ್ಯದರ್ಶಿ ಹಾಗೂ ಕರಿಯಂಗಳ ಗ್ರಾಮ ಪಂಚಾಯತ್‌ಯ ಸದಸ್ಯ ನವಾಝ್ ಬಡಕಬೈಲ್ ಅವರು ಪಕ್ಷದ ಪದಾಧಿಕಾರಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಧನಂಜಯ ಅಡ್ಪಂಗಾಯ, ಎಂ. ಶಶಿಧರ್ ಹೆಗ್ಡೆ, ಸುರೇಶ ಬಳ್ಳಾಲ್, ಯು.ಕೆ. ಮೋನು, ಬಿ.ಎಚ್.ಖಾದರ್, ಎಮ್.ಎಸ್.ಮುಹಮ್ಮದ್, ಎ.ಸಿ.ಭಂಡಾರಿ, ಡಾ.ರಘು, ಶಾಲೆಟ್ ಪಿಂಟೊ, ಮಿಥುನ್ ರೈ, ಉಮಾನಾಥ ಶೆಟ್ಟಿ, ಸಂತೋಷ ಕುಮಾರ್ ಶೆಟ್ಟಿ, ಜೆ. ಅಬ್ದುಲ್ ಸಲೀಂ, ನಿತ್ಯಾನಂದ ಶೆಟ್ಟಿ, ಅಬ್ಬಾಸ್ ಅಲಿ, ಅಪ್ಪಿ, ಆರ್.ಕೆ.ಪೃಥ್ವಿರಾಜ್, ಸುರೇಂದ್ರ ಕಂಬಳಿ, ದಿವಾಕರ ಗೌಡ, ರಾಜಶೇಖರ್ ಕೋಟ್ಯಾನ್, ಟಿ.ಎಂ.ಶಹೀದ್, ವಿಶ್ವಾಸ್ ಕುಮಾರ್ ದಾಸ್, ದನಂಜಯ ಮಟ್ಟು, ಎಚ್.ಎ. ಅಶ್ರಫ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಸದಾಶಿವ್ ಉಳ್ಳಾಲ್ ವಂದಿಸಿದರು.