ಬಂಟ್ವಾಳ ಎಸ್‍ಡಿಪಿಐ ವಾರ್ಡ್ ಸಭೆ
Update: 2018-04-03 22:09 IST
ಬಂಟ್ವಾಳ, ಎ. 3: ಎಸ್‍ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಾರ್ಡ್ ಸಮಿತಿ ಸಭೆಯು ಬಂಟ್ವಾಳ ಕೆಳಗಿನ ಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆಯಿತು.
ಬಂಟ್ವಾಳ ಪುರಸಭೆ ಸದಸ್ಯ ಮುನೀಶ್ ಅಲಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಅವರು ಚುನಾವಣಾ ಪೂರ್ವ ತಯಾರಿಯ ಬಗ್ಗೆ ಪಕ್ಷದ ಕಾರ್ಯಕರ್ತರಲ್ಲಿ ಚರ್ಚಿಸಿದರು. ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷ ಅಬ್ದುಲ್ ಲತೀಫ್, ಹಿರಿಯರಾದ ಮುಹಮ್ಮದ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.