ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ
Update: 2018-04-03 22:21 IST
ಮಂಗಳೂರು, ಎ.3: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ 2017ನೆ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ನೀಡುವ ಕಾರ್ಯಕ್ರಮವು ಎ. 7ರಂದು ನಿಗದಿಯಾಗಿತ್ತು. ಆದರೆ 2018ರ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಚುನಾವಣೆ ಮುಗಿದ ನಂತರ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಸಮಾರಂಭ ಕಾರ್ಯಕ್ರಮವನ್ನು ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.