ಮಾಜಿ ಸಚಿವ ಪರಮೇಶ್ವರ್ ನಾಯಕ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
Update: 2018-04-03 22:51 IST
ಬೆಂಗಳೂರು, ಎ.3: ಮಾಜಿ ಸಚಿವ ಪಿ.ಟಿ. ಪರಮೇಶ್ವರ್ ನಾಯಕ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಮಾಜಿ ಸಚಿವ ಪರಮೇಶ್ವರ್ ನಾಯಕ್ 100 ಎಕರೆಗೂ ಅಧಿಕ ಭೂಮಿಯನ್ನು ಪತ್ನಿ ಪ್ರೇಮ, ಪುತ್ರ ಭರತ್ ಹಾಗೂ ಸಂಬಂಧಿಕರ ಹೆಸರಿನಲ್ಲಿ ಖರೀದಿಸಿದ್ದಾರೆ. 68 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿದ್ದಾರೆ. ಇವೆಲ್ಲವೂ ಅವರು ಸಚಿವರಾಗಿದ್ದ ವೇಳೆ ನಡೆಸಿದ ಅಕ್ರಮಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚುನಾವಣಾ ಆಯೋಗಕ್ಕೆ ನೀಡಿರುವ ದೂರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕಳುಹಿಸಿಕೊಡುತ್ತೇನೆ. ಜನರು ನೀಡಿದ ಅಧಿಕಾರವನ್ನು ತನ್ನ ಕುಟುಂಬದ ಸ್ವಾರ್ಥಕ್ಕೆ ಬಳಸಿಕೊಂಡು ಪರಮೇಶ್ವರನ್ನು ಚುನಾವಣಾ ಕಣದಿಂದ ದೂರವಿಡಬೇಕೆಂದು ಮನವಿ ಮಾಡುತ್ತೇನೆಂದು ತಿಳಿಸಿದರು.