ಮಾದಿಗ ಸಮುದಾಯಕ್ಕೆ ಹೆಚ್ಚು ಸೀಟು ಕೊಡುವವರಿಗೆ ಬೆಂಬಲ: ಬಿ.ಎ ಕೇಶವಮೂರ್ತಿ

Update: 2018-04-03 17:45 GMT

ಬೆಂಗಳೂರು, ಎ.3: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಮಾದಿಗ ಸಮುದಾಯಕ್ಕೆ ಕನಿಷ್ಟ 15ಸೀಟುಗಳನ್ನು ಬಿಟ್ಟು ಕೊಡಬೇಕೆಂದು ಕರ್ನಾಟಕ ಮಾದಿಗರ ಸಂಘಟನೆಗಳ ಸ್ವಾಭಿಮಾನದ ಒಕ್ಕೂಟದ ಅಧ್ಯಕ್ಷ ಬಿ.ಎ.ಕೇಶವಮೂರ್ತಿ ಒತ್ತಾಯಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾದಿಗ ಸಮುದಾಯ ಸುಮಾರು 150 ಕ್ಷೇತ್ರಗಳಲ್ಲಿ ಬಹುಸಂಖ್ಯಾತರಾಗಿದ್ದಾರೆ. ಹಾಗೂ 85 ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಆದರೂ ನಮ್ಮ ಸಮುದಾಯವನ್ನು ರಾಜಕೀಯವಾಗಿ ವಂಚಿಸಲಾಗಿದೆ ಎಂದು ಆರೋಪಿಸಿದರು.

ಮೀಸಲು ಕ್ಷೇತ್ರಗಳಲ್ಲಿಯೂ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಪಕ್ಷಕ್ಕಾಗಿ ವರ್ಷಾನುಗಟ್ಟಲೆ ಶ್ರಮಿಸಿದ್ದರೂ ಕೇವಲ ಜಾತಿಯ ಕಾರಣಕ್ಕಾಗಿ ಟಿಕೆಟ್ ನೀಡದೆ ವಂಚಿಸಲಾಗುತ್ತಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಮಾದಿಗ ಸಮುದಾಯಕ್ಕೆ ಹೆಚ್ಚು ಸೀಟು ನೀಡುವ ಪಕ್ಷಕ್ಕೆ ನಾವು ಬೆಂಬಲಿಸಲಿದ್ದೇವೆ ಎಂದು ಅವರು ಘೋಷಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಡಾ.ಕೆ.ಬೀಮರಾಜು, ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಜೆ.ಸಿ.ಪ್ರಕಾಶ್, ಒಕ್ಕೂಟದ ಕಾರ್ಯದರ್ಶಿ ಅಮರ್ ನಾರಾಯಣ್, ರವಿ ಮರಡಿಪುರ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News