ರವಿ ಬೆಳಗೆರೆ ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಸಿಬಿ ಮನವಿ

Update: 2018-04-04 16:08 GMT

ಬೆಂಗಳೂರು, ಎ.4: ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ್ದ ಆರೋಪ ಹೊತ್ತಿರುವ ಹಿರಿಯ ಪತ್ರಕರ್ತ ರವಿ ಬೆಳಗೆರೆ ಜಾಮೀನು ರದ್ದು ಕೋರಿ ಸಿಸಿಬಿ ಅಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈಗಾಗಲೇ ಸೆಷನ್ಸ್ ಕೋರ್ಟ್ ಪತ್ರಕರ್ತ ರವಿ ಬೆಳಗೆರೆಗೆ ಜಾಮೀನು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಈಗಾಗಲೇ ರವಿ ಬೆಳಗೆರೆ ಮತ್ತು ಶಶಿಧರ್ ಮುಂಡೇವಾಡಿ ವಿರುದ್ಧ ಚಾರ್ಜ್‌ಶೀಟ್ ಕೂಡ ಸಲ್ಲಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು ಬಂಧಿಸಿದ ಸಮಯದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ರವಿ ಬೆಳಗೆರೆ ಜಾಮೀನು ಸಿಕ್ಕ ನಂತರವೂ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ಸಿಸಿಬಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಅನಾರೋಗ್ಯ ಮುಂದಿಟ್ಟುಕೊಂಡು ನೀಡಲಾದ ಜಾಮೀನನ್ನು ರದ್ದು ಮಾಡಬೇಕು ಎಂದು ಸಿಸಿಬಿ ಅಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಸಿಬಿ ಅಧಿಕಾರಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News