ಜುಲೈನಲ್ಲಿ ಶ್ರೀಲಂಕಾಕ್ಕೆ ದಕ್ಷಿಣ ಆಫ್ರಿಕ ಪ್ರವಾಸ

Update: 2018-04-04 18:46 GMT

ಕೇಪ್‌ಟೌನ್, ಎ.4: ಮುಂದಿನ ವರ್ಷ ಇಂಗ್ಲೆಂಡ್ ಹಾಗೂ ವೇಲ್ಸ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ತಯಾರಿ ನಡೆಸುವ ಉದ್ದೇಶದಿಂದ ಐದು ಪಂದ್ಯಗಳ ಏಕದಿನ ಸರಣಿಯನ್ನು ಆಡಲು ಜುಲೈನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳುವುದಾಗಿ ದ. ಆಫ್ರಿಕ ದೃಢಪಡಿಸಿದೆ.

ಶ್ರೀಲಂಕಾ ಪ್ರವಾಸದ ವೇಳೆ ದಕ್ಷಿಣ ಆಫ್ರಿಕ ತಂಡ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

ಬಾಂಗ್ಲಾದೇಶ, ಭಾರತ ಹಾಗೂ ಆಸ್ಟ್ರೇಲಿಯ ತಂಡಗಳನ್ನು ತನ್ನ ನೆಲದಲ್ಲಿ ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ದಕ್ಷಿಣ ಆಫ್ರಿಕ ಆರನೇ ಬಾರಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ದ.ಆಫ್ರಿಕ ತಂಡ ಶ್ರೀಲಂಕಾದಲ್ಲಿ 1993 ಹಾಗೂ 2014ರಲ್ಲಿ ಸರಣಿಯನ್ನು ಗೆದ್ದುಕೊಂಡಿದೆ. ಮೊದಲ ಟೆಸ್ಟ್ ಪಂದ್ಯ ಗಾಲೆಯಲ್ಲಿ(ಜು.12-16), ಎರಡನೇ ಟೆಸ್ಟ್ ಕೊಲಂಬೊ(ಜು.20-24)ದಲ್ಲಿ ನಡೆಯಲಿದೆ. ಐದು ಪಂದ್ಯಗಳ ಏಕದಿನ ಸರಣಿಯು ಜು.29 ರಂದು ಡಾಂಬುಲ್ಲಾದಲ್ಲಿ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News