×
Ad

ನೀತಿ ಸಂಹಿತೆ ಉಲ್ಲಂಘಿಸಿ ಅವಿಶ್ವಾಸ ನಿರ್ಣಯದ ಸಭೆ: ದೂರು

Update: 2018-04-05 22:31 IST

ಉಡುಪಿ, ಎ.5: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅವಿಶ್ವಾಸ ನಿರ್ಣಯದ ಸಭೆಯನ್ನು ಕರೆದಿರುವ ಬಗ್ಗೆ ಕುಕ್ಕೆಹಳ್ಳಿ ಗ್ರಾಪಂ ಅಧ್ಯಕ್ಷೆ ಆಶಾಲತಾ ಡಿ.ಶೆಟ್ಟಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಎ.4ರಂದು ದೂರು ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಕುಕ್ಕೆಹಳ್ಳಿ ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವ ಹಿಸುತ್ತಿದ್ದು, ಕುಂದಾಪುರ ಸಹಾಯಕ ಕಮಿಷನರ್ ನನ್ನ ವಿರುದ್ಧ ಅವಿಶ್ವಾಸ ನಿರ್ಣಯದ ಸೂಚನೆಯನ್ನು ಪರ್ಯಾಲೋಚಿಸಲು ಎ.13ರಂದು ಗ್ರಾಪಂ ಕಚೇರಿಯಲ್ಲಿ ಸಭೆ ನಡೆಸಲು ನನಗೆ ಸೇರಿದಂತೆ ಎಲ್ಲ ಗ್ರಾಪಂ ಸದಸ್ಯರಿಗೆ ನೋಟೀಸು ನೀಡಿದ್ದಾರೆ.

ಈ ಪ್ರಕ್ರಿಯೆಯು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಯಾಗಿದೆ. ಆದುದರಿಂದ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಈ ಪ್ರಕ್ರಿಯೆಯನ್ನು ಮೊಟಕುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸ ಬೇಕು ಎಂದು ಆಶಾಲತಾ ಡಿ.ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News