ಎ.8: ಮತದಾನದ ಕುರಿತು ಅರಿವು ಮೂಡಿಸಲು ವಿಶೇಷ ಚೇತನರಿಂದ ದ್ವಿಚಕ್ರ ವಾಹನ ರ್ಯಾಲಿ
Update: 2018-04-06 20:34 IST
ಉಡುಪಿ, ಎ.6: ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಎ.8ರ ರವಿವಾರ ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯಲ್ಲಿ ಶ್ರವಣದೋಷ ಮತ್ತು ದೃಷ್ಠಿದೋಷದ ವಿಶೇಷ ಚೇತನರಿಗೆ ಮತದಾನದ ಬಗ್ಗೆ ಅರಿವು ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಸಂಜೆ 5 ಕ್ಕೆ ಮಲ್ಪೆಯ ಕಡಲ ಕಿನಾರೆಯಲ್ಲಿ ವಿಶೇಷ ಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ರ್ಯಾಲಿ ಹಾಗೂ ವಿಶೇಷ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ವಿಶೇಷ ಚೇತನ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ