ಸಾರ್ವಜನಿಕ ಹಿತಾಸಕ್ತಿಯಿಂದ ವಸುಂಧರಾ ರಾಜೆಯನ್ನು ಕಿತ್ತೊಗಿಯಿರಿ

Update: 2018-04-06 16:44 GMT

ಜೈಪುರ, ಎ.6: ಪಕ್ಷದ 38ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಬಿಜೆಪಿ ಮುಖಂಡರು ಸಂಭ್ರಮಿಸುತ್ತಿದ್ದರೆ, ಪಕ್ಷದ ಬಂಡಾಯ ಶಾಸಕ ಘನಶ್ಯಾಂ ತಿವಾರಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದು ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಆಕೆಯನ್ನು ಕಿತ್ತೆಸೆಯಬೇಕು ಎಂದು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದ ಅವರು ಕಟುಶಬ್ದಗಳಲ್ಲಿ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸಂಗನೇರ್ ಕ್ಷೇತ್ರದ ಶಾಸಕರಾಗಿರುವ ಅವರು, "ರಾಜೆಯವರು ವೈಯಕ್ತಿಕ ಲಾಭಕ್ಕಾಗಿ ತಮ್ಮ ರಾಜಕೀಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಹಣ ಸುಲಿಗೆ ಮಾಡುವವರ ಗುಂಪು" ಎಂದು ದೂರಿದ್ದಾರೆ.

ರಾಜಸ್ಥಾನ ಸರ್ಕಾರ ಸರ್ವಾಧಿಕಾರಿ ಸರ್ಕಾರ. ಹಣ ಸುಲಿಗೆ ಮಾಡುವವರ ಕೂಟ. ಭ್ರಷ್ಟಾಚಾರ ಈ ಸರ್ಕಾರದ ಅವಧಿಯಲ್ಲಿ ಸಾಂಸ್ಥಿಕವಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲ ಜಾತಿ ಹಾಗೂ ಸಮುದಾಯಗಳಲ್ಲಿ ರಾಜೇ ಸರ್ಕಾರದ ವಿರುದ್ಧ ಅಸಮಾಧಾನವಿದೆ ಎಂದು ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News