ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಒತ್ತಾಯಿಸಿ ಚುನಾವಣಾಧಿಕಾರಿಗೆ ದ.ಕ. ಜಿಲ್ಲಾ ಕಾಂಗ್ರೆಸ್ ದೂರು
Update: 2018-04-07 16:26 IST
ಮಂಗಳೂರು, ಎ.7: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಕೋಮುದ್ವೇಷವನ್ನು ಹರಡುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿರುವ ದ.ಕ. ಜಿಲ್ಲಾ ಕಾಂಗ್ರೆಸ್, ಚುನಾವಣೆ ಮುಗಿಯುವರೆಗೆ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಚುನಾಣಾಧಿಕಾರಿಗೆ ಶನಿವಾರ ದೂರು ಸಲ್ಲಿಸಿದೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ನಿಯೋಗವು ಚುನಾವಣಾಧಿಕಾರಿ ವೈಶಾಲಿ ಅವರಿಗೆ ದೂರು ಸಲ್ಲಿಸಿತು.
ಬಿಜೆಪಿ ಮುಖಂಡ ರಾಜಾರಾಂ ಭಟ್ ಆಯೋಜಿಸಿದ್ದ ಉಪವಾಸ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಕೋಮುದ್ವೇಷದ ಮಾತುಗಳನ್ನಾಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಚುನಾವಣೆ ಮುಗಿಯುವವರೆಗೆ ಬಂಧಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.