ಭಟ್ಕಳ: ತರಬಿಯತ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಸೈಯದ್ ಅಶ್ರಫ್ ಬರ್ಮಾವರ್ ನಿಧನ
ಭಟ್ಕಳ, ಎ. 7: ಇಲ್ಲಿನ ಹಲವು ಪ್ರಮುಖ ಶಿಕ್ಷಣ ಹಾಗೂ ಸಮಾಜಿಕ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಶಾಲೆಯ ಉಪಾಧ್ಯಕ್ಷ ಸೈಯದ್ ಮುಹಮ್ಮದ್ ಅಶ್ರಫ್ ಬರ್ಮಾವರ್ (72) ಶನಿವಾರ ಜಾಲಿ ಪ.ಪಂ. ವ್ಯಾಪ್ತಿಯ ನೂರ್‌ಬಾಗ್ ನಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು ಹಾಗು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ವೆಲ್ಫೇರ್ ಆಸ್ಪತ್ರೆ, ಇಸ್ಲಾಮಿಕ್ ವೆಲ್ಫೇರ್ ಸೊಸೈಟಿ, ಜಮಾಅತೆ ಇಸ್ಲಾಮಿ ಹಿಂದ್, ಅಲ್ ಕೌಸರ್ ಗರ್ಲ್ಸ್ ಕಾಲೇಜ್, ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನ್ಯೂಶಮ್ಸ್ ಸ್ಕೂಲ್, ಅಂಜುಮಾನ್ ಶಿಕ್ಷಣ ಸಂಸ್ಥೆ, ಇದಾರೆ ಅದಬೆ ಇಸ್ಲಾಮಿ ಹಿಂದ್ ಹಾಗೂ ಎಪಿಸಿಆರ್ ಸಂಸ್ಥೆಯಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡು, ಸಾಮಾಜಿಕ ಕಾರ್ಯದಲ್ಲಿ ಕ್ರಿಯಾಶೀಲರಾಗಿದ್ದರು.
ಮೃತರು ಉತ್ತಮ ಸಾಮಾಜಿಕ ಕಳಕಳಿಯನ್ನು ಹೊಂದಿದ್ದು, ನವಾಯತಿ ಹಾಗೂ ಉರ್ದು ಭಾಷೆಗಳಲ್ಲಿ ನೂರಾರು ಕವಿತೆಗಳನ್ನು ಬರೆದಿದ್ದಾರೆ.
ಅವರ ನಿಧನಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ತರಬಿಯತ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಅಬ್ದುಲ್ ಖಾದಿರ್ ಬಾಷಾ ರುಕ್ನುದ್ದೀನ್, ಕಾರ್ಯದರ್ಶಿ ಮುಹಮ್ಮದ್ ತಲ್ಹಾ ಸಿದ್ದಿಬಾಪ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಯ ಮುಖಂಡರು ಸಂತಾಪ ಸೂಚಿಸಿದ್ದಾರೆ.