ಐಪಿಎಲ್ ಉದ್ಘಾಟನಾ ಪಂದ್ಯ: ಚೆನ್ನೈ ಗೆಲುವಿಗೆ 166 ರನ್ ಗುರಿ
ಮುಂಬೈ, ಎ.7: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಐಪಿಎಲ್ ಉದ್ಘಾಟನಾ ಪಂದ್ಯದ ಗೆಲುವಿಗೆ 166 ರನ್ ಗುರಿ ನೀಡಿದೆ.
ಟಾಸ್ ಜಯಿಸಿದ ಚೆನ್ನೈ ನಾಯಕ ಎಂ.ಎಸ್. ಧೋನಿ ಮುಂಬೈ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಮುಂಬೈ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 165 ರನ್ ಗಳಿಸಿತು.
3ನೇ ಓವರ್‌ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಎವಿನ್ ಲೂವಿಸ್(0) ವಿಕೆಟ್ ಕಳೆದುಕೊಂಡ ಮುಂಬೈ ಕಳಪೆ ಆರಂಭ ಪಡೆಯಿತು. ನಾಯಕ ರೋಹಿತ್ ಶರ್ಮ(15) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ.
ಆಗ 3ನೇ ವಿಕೆಟ್‌ಗೆ 78 ರನ್ ಜೊತೆಯಾಟ ನಡೆಸಿದ ಇಶನ್ ಕಿಶನ್(40) ಹಾಗೂ ಸೂರ್ಯ ಕುಮಾರ್ ಯಾದವ್(43) ತಂಡದ ಸ್ಕೋರನ್ನು 100ರ ಗಡಿ ತಲುಪಿಸಿದರು. ಕಿಶನ್ ಹಾಗೂ ಯಾದವ್ ಔಟಾದ ಬಳಿಕ ಪಾಂಡ್ಯ ಸಹೋದರರಾದ ಹಾರ್ದಿಕ್(ಅಜೇಯ 22) ಹಾಗೂ ಕ್ರನಾಲ್(ಅಜೇಯ 41) 5ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 52 ರನ್ ಸೇರಿಸಿ ಚೆನ್ನೈ ಗೆಲುವಿಗೆ ಸ್ಪರ್ಧಾತ್ಮಕ ಮೊತ್ತ ನೀಡಿದರು.
ಚೆನ್ನೈ ಪರ ಆಲ್‌ರೌಂಡರ್ ಶೇನ್ ವ್ಯಾಟ್ಸನ್(2-29) ಯಶಸ್ವಿ ಬೌಲರ್ ಎನಿಸಿಕೊಂಡರು.