×
Ad

ಜೆಡಿಎಸ್ ಮುಂದಿನ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದು ಖಚಿತ: ಶಾಸಕ ಎಚ್.ಕೆ ಕುಮಾರಸ್ವಾಮಿ

Update: 2018-04-07 22:48 IST

ಸಕಲೇಶಪುರ,ಎ.07: ಎಲ್ಲಾ ಸಮುದಾಯದವರ ಬೆಂಬಲ ಪಡೆದಿರುವ ಜೆಡಿಎಸ್ ಪಕ್ಷ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದು ಖಚಿತವೆಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಲಯನ್ಸ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದಜೆಡಿಎಸ್ ನಗರ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳು ಅಧಿಕಾರದಲ್ಲಿದ್ದರು ಸಹ ಜೆಡಿಎಸ್ ಕ್ಷೇತ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಪಟ್ಟಣದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ನಡೆದಿದ್ದು ಸುಸಜ್ಜಿತ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ರಸ್ತೆಗಾಗಿಯೆ ಸುಮಾರು 15 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಸುಮಾರು 10 ಕೋಟಿ ರೂ ವೆಚ್ಚದಲ್ಲಿ ಎತ್ತಿನಹೊಳೆ ಎರಡನೇ ಹಂತದ ಯೋಜನೆಯಲ್ಲಿ ಪಟ್ಟಣದಲ್ಲಿ ಶುದ್ದ ಕುಡಿಯುವ ನೀರನ್ನು ಪೂರೈಕೆ ಮಾಡಲು ಯೋಜನೆ ರೂಪಿಸಲಾಗಿದೆ. ಪೌರಕಾರ್ಮಿಕರಿಗಾಗಿ 110 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಜೊತೆಗೆ ಮಂಜ್ರಾಬಾದ್ ಕೋಟೆ ಅಭಿವೃದ್ದಿಗಾಗಿ 50 ಲಕ್ಷ ಬಿಡುಗಡೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜನಸಾಮಾನ್ಯರಿಗಾಗಿ ಯೋಜನೆ ರೂಪಿಸಿದರು. ಮಾಜಿ ಪ್ರಧಾನಿ ದೇವೆಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಅಲ್ಪ ಸಂಖ್ಯಾತರ ಹಿತರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರು, ಕಾಂಗ್ರೆಸ್ ಅಲ್ಪಸಂಖ್ಯಾತರ ಯಾವುದೇ ಸಮಸ್ಯೆಗಳನ್ನು ಬಗೆಹರಿಸದೆ ಕೇವಲ ಅಲ್ಪಸಂಖ್ಯಾತರ ರಕ್ಷಕನಂತೆ ಮಾತನಾಡುತ್ತದೆ. ಕೇಂದ್ರ ಸರ್ಕಾರ ಜಿಎಸ್‍ಟಿ ತಂದು ಜನಸಾಮಾನ್ಯರಿಂದ ತೆರಿಗೆ ಲೂಟಿ ಮಾಡುತ್ತಿದೆ. ಆದ್ದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳನ್ನು ತಿರಸ್ಕರಿಸಿ ಜನ ಕುಮಾರಸ್ವಾಮಿರವರನ್ನು ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ನೋಡಲು ಇಷ್ಟ ಪಟ್ಟಿದ್ದಾರೆ ಎಂದರು.

ಈ ಸಂಧರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಲ್ ಸೋಮಶೇಖರ್, ಪುರಸಭಾ ಅಧ್ಯಕ್ಷೆ ಪುಷ್ಪಾವತಿ, ಉಪಾಧ್ಯಕ್ಷೆ ಲಲಿತಮ್ಮ, ಪುರಸಭಾ ಸದಸ್ಯರುಗಳಾದ ಸಂತೋಷ್ ಕುಮಾರ್ ಜೈನ್, ಮುಖೇಶ್ ಶೆಟ್ಟಿ, ಉಮೇಶ್, ಸೂರ್ಯ ಮುಂತಾದವರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News