ಕಿಡ್ನಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಜೇಟ್ಲಿ

Update: 2018-04-07 18:47 GMT

ಹೊಸದಿಲ್ಲಿ, ಎ. 7: ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾನು ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ವೈದ್ಯರು ನಿರ್ಧರಿಸಲಿದ್ದಾರೆ ಎಂದು ಈ ವಾರದ ಆರಂಭದಲ್ಲಿ ಜೇಟ್ಲಿ ಟ್ವೀಟ್ ಮಾಡಿದ್ದರು. 

‘‘ಕಿಡ್ನಿ ಶಸ್ತ್ರಚಿಕಿತ್ಸೆಗಾಗಿ ಜೇಟ್ಲಿ ನಾಳೆ ಬೆಳಗ್ಗೆ ಎಐಐಎಂಎಸ್‌ಗೆ ದಾಖಲಾಗಲಿದ್ದಾರೆ. ಎಲ್ಲ ಔಪಚಾರಿಕತೆಗಳನ್ನು ಪೂರ್ಣಗೊಳಿಸಲಾಗಿದೆ’’ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ. 65ರ ಹರೆಯದ ಜೇಟ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ವಲಯದ ಪ್ರಮುಖ ಸದಸ್ಯ. 2014ರಲ್ಲಿ ಅವರಿಗೆ ಗ್ಯಾಸ್ಟ್ರಿಕ್ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News